ವಿಮೋಚನಕಾಂಡ

ಅಧ್ಯಾಯ : 1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40


ಅಧ್ಯಾಯ 6

1 ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
2 ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
3 ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
4 ಕಾನಾನ್‌ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
5 ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್‌ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
6 ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
7 ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
8 ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
9 ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
10 ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
11 ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
12 ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್‌ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
13 ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
14 ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್‌ ಫಲ್ಲು ಹೆಚ್ರೋನ್‌ ಕರ್ವಿಾ; ಇವರೇ ರೂಬೇನನ ಗೋತ್ರಗಳು.
15 ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
16 ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
17 ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.
18 ಕೆಹಾತನ ಕುಮಾರರು: ಅಮ್ರಾಮ್‌ ಇಚ್ಹಾರ್‌ ಹೆಬ್ರೋನ್‌ ಉಜ್ಜೀಯೇಲ್‌. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
19 ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
21 ಇಚ್ಹಾರನ ಕುಮಾರರು: ಕೋರಹ ನೆಫೆಗ್‌ ಜಿಕ್ರೀ.
22 ಉಜ್ಜೀಯೇಲನ ಕುಮಾರರು: ವಿಾಷಾಯೇಲ್‌ ಎಲ್ಚಾಫಾನ್‌ ಸಿತ್ರೀ.
23 ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್‌ ಅಬೀಹೂ ಎಲ್ಲಾಜಾರ್‌ ಈತಾಮಾರ್‌ ಇವರನ್ನು ಹೆತ್ತಳು.
24 ಕೋರಹನ ಕುಮಾರರು: ಅಸ್ಸೀರ್‌ ಎಲ್ಕಾನಾ ಅಬೀಯಾಸಾಫ್‌ ಎಂಬವರು. ಇವರೇ ಕೋರಹೀಯರ ಗೋತ್ರಗಳು.
25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
26 ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
27 ಇಸ್ರಾಯೇಲ್‌ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
28 ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
29 ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.
30 ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.