ಯೋಬನು

ಅಧ್ಯಾಯ : 1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42


ಅಧ್ಯಾಯ 22

1 ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
2 ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
3 ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
4 ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
5 ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
6 ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
7 ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
8 ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
9 ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
10 ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
11 ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
12 ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
13 ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
14 ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
15 ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
16 ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
17 ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
18 ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
19 ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
20 ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
21 ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
22 ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
23 ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
24 ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್‌ ಬಂಗಾರವನ್ನು ತೆಗೆದು ಹಾಕುವಿ.
25 ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
26 ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
27 ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
28 ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
29 ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.
30 ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.